ಕುಪ್ಪಿ ಗಿಡ
ವಾತನೋವು ಸೆಳೆತಕ್ಕೆ :-
ಹಸೀ ಕುಪ್ಪಿ ಎಲೆಗಳನ್ನು ಜಜ್ಜಿ, ಎಳ್ಳೆಣ್ಣೆಯಲ್ಲಿ ಬೆರೆಸಿ, ತೈಲ ಉಳಿಯುವಂತೆ ಕಾಯಿಸಿ, ಶೋಧಿಸಿಟ್ಟುಕೊಳ್ಳುವುದು. ಬೇಕಾದರೆ ಸುಗಂಧ ವಸ್ತುಗಳ ಚೂರ್ಣವನ್ನು ಸೇರಿಸಿಕೊಳ್ಳಬಹುದು. ನೋವಿರುವ ಕಡೆಗೆ ಹಚ್ಚುವುದು.
ಮಲಬದ್ಧತೆಗೆ :-
ಮಕ್ಕಳು ಮಲಬದ್ಧತೆಯಾಗಿ ಅಳುತ್ತಿದ್ದರೆ ಹಸೀ ಎಲೆಗಳನ್ನು ತಂದು ಚೆನ್ನಾಗಿ ತೊಳೆದು ಜಜ್ಜಿ ಸ್ವಲ್ಪ ಭಾಗವನ್ನು ಮಲದ್ವಾರದಲ್ಲಿ ಸೇರಿಸುವುದು.
ಮಕ್ಕಳ ಶೀತ ವ್ಯಾಧಿಗೆ :-
ಹಸೀ ಎಲೆಗಳ ರಸವನ್ನು ಸ್ವಲ್ಪ ಜೇನು ಸೇರಿಸಿ ನೆಕ್ಕುವುದು. ಮೊದಲು ಸ್ವಲ್ಪ ವಾಂತಿಯಾಗಿ, ನಂತರ ವಾಸಿಯಾಗುವುದು. ಈ ರಸ ಸೇವಿಸುವುದರಿಂದ ದೊಡ್ಡವರಲ್ಲಿ ಕೆಮ್ಮು, ಕಫ, ದಮ್ಮು ಗುಣವಾಗುವುದು.
ಮಕ್ಕಳ ಹೊಟ್ಟೆನೋವಿಗೆ :-
ಬೆಳ್ಳುಳ್ಳಿ ಮೆಣಸು ಇವುಗಳ ಸಮತೂಕದ ಎರಡು ಭಾಗ ಕುಪ್ಪಿ ಸೊಪ್ಪನ್ನು ಸೇರಿಸಿ, ನುಣ್ಣಗೆ ಅರೆದು, ಸ್ವಲ್ಪ ಭಾಗವನ್ನು ಹಾಲಿನಲ್ಲಿ ಕದಡಿ ಕುಡಿಸುವುದು.
ಪೀನಾಸಿ ರೋಗಕ್ಕೆ(ಮೂಗಿಗೆ ವಾಸನೆ ತಿಳಿಯದಿರುವುದು) :-
ಒಂದು ಬೆಳ್ಳುಳ್ಳಿ ಹಿಲಕು, ಒಂದು ಮೆಣಸಿನಕಾಳು ಮತ್ತು ನಾಲ್ಕೈದು ಕುಪ್ಪಿ ಎಲೆಗಳನ್ನು ಸೇರಿಸಿ, ನುಣ್ಣಗೆ ಅರೆದು ಬಟ್ಟೆಯಲ್ಲಿ ಶೋಧಿಸಿ ಮೂಗಿನ ಎರಡೂ ಹೊಳ್ಳೆಗಳಿಗೆ ನಾಲ್ಕೈದು ತೊಟ್ಟು ಬಿಡುವುದು.
ತುರಿಕೆ, ಕಜ್ಜಿಗೆ :-
ಹಸೀ ಎಲೆಗಳನ್ನು ತಂದು, ಸ್ವಲ್ಪ ಅಡಿಗೆ ಉಪ್ಪು ಸೇರಿಸಿ ನುಣ್ಣಗೆ ಕಲ್ಪತ್ತಿನಲ್ಲಿ ಅರೆದು ಪಟ್ಟು ಹಾಕುವುದು. ಸಿಪಲಿಸ್ ಎನ್ನುವ ಮರ್ಮಾಂಗ ಹುಣ್ಣಿಗೆ ಸಹ ಇದೇ ರೀತಿ ಚಿಕಿತ್ಸೆ ಮಾಡುವುದು.
ಮೂರ್ಛೆಗೆ :-
ಹಸೀ ಕುಪ್ಪಿ ಎಲೆಗಳ ರಸವನ್ನು ಮೂಗಿನ ಎರಡೂ ಹೊಳ್ಳೆಗಳಿಗೆ ತೊಟ್ಟು ತೊಟ್ಟಾಗಿ ಬಿಡುವುದು.ಬಹು ಬೇಗ ಪ್ರಜ್ಞೆ ಬಂದು ಎಚ್ಚರವಾಗುವುದು. ಒಂದೆರಡು ಬಾರಿ ತಣ್ಣೀರನ್ನು ಮುಖಕ್ಕೆ ತುಂತುರು ರೂಪದಂತೆ ಚಿಮುಕಿಸುವುದು. ಕಿವಿ ನೋವಿನಲ್ಲಿ ಎಲೆಗಳ ರಸವನ್ನು ನೋವಿರುವ ಕವಿಗಳಿಗೆ ತೊಟ್ಟು ತೊಟ್ಟಾಗಿ ಬಿಡುವುದು. ಸ್ವಲ್ಪ ಬಿಸಿ ಮಾಡಿ ಹಾಕುವುದು.
ಕೃಪೆ : ಸಸ್ಯ ಕಣಜ
ಸೂಚನೆ : ಈ
ಲೇಖನ ಸದಸ್ಯರ ಮಾಹಿತಿಗಾಗಿ ಮಾತ್ರ. ನಾನು ಆಯುರ್ವೇದ ವೈದ್ಯ ಅಲ್ಲ. ಔಷಧವಾಗಿ ಉಪಯೋಗಿಸಬಯಸುವವರು
ತಪ್ಪದೇ ಹೆಚ್ಚಿಗೆ ತಿಳಿದವರ ಹಾಗೂ ವೈದ್ಯರ ಸಲಹೆ ಪಡೆಯಿರಿ.
No comments:
Post a Comment